ಕುಪ್ಪೆಪದವು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಕ್ಷಿತಾ ಡಿ. ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಬುಧವಾರ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಶ್ವೇತ ಎನ್., ನೂತನ ಪಿಡಿಒ ಡಾ. ರಮ್ಯಾ ಕೆ.ಎಸ್. ಹಾಗೂ ಕಾರ್ಯದರ್ಶಿ ಲಕ್ಷ್ಮಣ್ ಸಪಲಿಗ ಉಪಸ್ಥಿತರಿದ್ದು, ರಕ್ಷಿತಾ ಡಿ. ಅವರ ಸೇವೆಯನ್ನು ಸ್ಮರಿಸಿ ಮುಂದಿನ ಸೇವಾ ಜೀವನಕ್ಕೆ ಶುಭ ಹಾರೈಸಿದರು.
ನಿಕಟಪೂರ್ವ ಅಧ್ಯಕ್ಷೆ ವಿಮಲಾ ಗಿರಿಧರ್, ನಿಕಟಪೂರ್ವ ಉಪಾಧ್ಯಕ್ಷ ಮೊಹಮ್ಮದ್ ಷರೀಫ್, ನಿಕಟಪೂರ್ವ ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಗ್ರಂಥಪಾಲಕರು, ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಕ್ಷಿತಾ ಡಿ. ಅವರಿಗೆ ಶುಭಾಶಯ ಕೋರಿದರು. ರಫೀಕ್ ಕೆ. ಕಾರ್ಯಕ್ರಮ ನಿರೂಪಿಸಿದರು.