ಮೂಡುಬಿದಿರೆ: ಭಾರೀ ಗಾಳಿ-ಮಳೆಯ ಪರಿಣಾಮ ಪುತ್ತಿಗೆ ಗ್ರಾಮದ ಹಂಡೇಲು ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡದ ಗೋಡೆ ಹಾಗೂ ಛಾವಣಿಯ ಭಾಗಗಳಿಗೆ ಹಾನಿಯಾಗಿದೆ. ಗೋಡೆಯ ಮೇಲ್ಭಾಗದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಹಂಚಿನ ಭಾಗವೂ ಅಪಾಯಕಾರಿ ಸ್ಥಿತಿಯಲ್ಲಿದೆ.