ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು, ಮಂಗಳೂರು ಜಿಲ್ಲೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಆಗಸ್ಟ್ 9ರಂದು ಸಂಜೆ 6.30ಕ್ಕೆ ನಡೆಯಲಿದೆ. ವಕೀಲ, ವಾಗ್ಮಿ ಶರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯುವ ಈ ಮೆರವಣಿಗೆಯು ಐತಿಹಾಸಿಕ ಸಾವಿರ ಕಂಬದ ಬಸದಿಯಿಂದ ಆರಂಭವಾಗಿ ಸಮಾಜ ಮಂದಿರದವರೆಗೆ ಸಾಗಲಿದೆ. ಭಜನಾ ತಂಡಗಳು, ಯುವ ಸಂಘಟನೆಗಳು, ಮಹಿಳೆಯರು, ಯುವಕರು ಹಾಗೂ ಹಿರಿಯರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚೆಂಡೆ ವಾದನ, ನಾಸಿಕ್ ಬ್ಯಾಂಡ್ ಹಾಗೂ ವಿವಿಧ ವಾದ್ಯಘೋಷಗಳು ಮೆರವಣಿಗೆಗೆ ವಿಶೇಷ ಮೆರುಗು ನೀಡಲಿವೆ. ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಭಟ್ಟಾರಕ ಸ್ವಾಮೀಜಿಯ ಆಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಖ್ಯಾತ ನ್ಯಾಯವಾದಿ ಹಾಗೂ ಪ್ರಖರ ವಾಗ್ಮಿ ಪೃಥ್ವಿಶ್ ಧರ್ಮಸ್ಥಳ ದಿಕ್ಸೂಚಿ ಭಾಷಣ ಮಾಡಲಿದ್ದು, ರುದ್ರಾಂಶ ಕನ್ಸ್ಟ್ರಕ್ಷನ್ಸ್ ಮಾಲೀಕ ಹಾಗೂ ಯುವ ನಾಯಕ ಅಜಯ್ ದೀಕ್ಷಿತ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ಸಂಯೋಜಕ ಹರಿಶ್ಚಂದ್ರ ಕೆ. ಸಿ., ಸಹಸಂಯೋಜಕರಾದ ಶರತ್ ಮಿಜಾರ್ ಮತ್ತು ಸಂತೋಷ್ ಕುಮಾರ್ ಬನ್ನಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.