ಮೂಡುಬಿದಿರೆ: ಕಣಂಜಾರು ಶಿವಪ್ರಸಾದ್ ಹೆಗ್ಡೆ ಅವರು ಲಯನ್ಸ್ ಜಿಲ್ಲಾ ಸಂಪುಟದ ರಸ್ತೆ ಸುರಕ್ಷತೆ ಮತ್ತು ರಸ್ತೆ ಅಪಘಾತ ನಿಯಂತ್ರಣ ವಿಭಾಗದ ಜಿಲ್ಲಾ ಮುಖ್ಯ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ.

ಲಯನ್ಸ್ ಕ್ಲಬ್ ಮೂಡುಬಿದಿರೆಯ ಸುವರ್ಣ ಮಹೋತ್ಸವ ವರ್ಷದ ಅಧ್ಯಕ್ಷರಾಗಿದ್ದ ಶಿವಪ್ರಸಾದ್ ಹೆಗ್ಡೆ ಕಣಂಜಾರ್ ಎಂ.ಜಿ.ಎಫ್., ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಶಾಲಾ-ಕಾಲೇಜುಗಳು ಮತ್ತು ಸಂಘ ಸಂಸ್ಥೆಗಳಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಪಾಲನೆ ಕುರಿತು ನಿರಂತರವಾಗಿ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆ.

ಕಾರ್ಯಾಗಾರಗಳ ಮೂಲಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಲಯನ್ಸ್ ಜಿಲ್ಲೆ 317ಡಿ ರಾಜ್ಯಪಾಲ ಎಚ್.ಎಂ. ತಾರಾನಾಥ್ ಅವರು 2026-27ರ ಅವಧಿಗೆ ಶಿವಪ್ರಸಾದ್ ಹೆಗ್ಡೆ ಅವರನ್ನು ರಸ್ತೆ ಸುರಕ್ಷತೆ ಮತ್ತು ರಸ್ತೆ ಅಪಘಾತ ನಿಯಂತ್ರಣ ವಿಭಾಗದ ಜಿಲ್ಲಾ ಮುಖ್ಯ ಸಂಯೋಜಕರಾಗಿ ಆಯ್ಕೆ ಮಾಡಿದ್ದಾರೆ.