ಮೂಡುಬಿದಿರೆ: ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.
ಸೆಪ್ಟೆಂಬರ್ 5ರಂದು ಮೂಡುಬಿದಿರೆಯ ಕೆ. ಅಮರನಾಥ ಶೆಟ್ಟಿ ವೃತ್ತದ ಬಳಿಯ ವೇಣೂರು ಕೃಷ್ಣಯ್ಯ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಬೆದ್ರದ ಕೃಷ್ಣೋತ್ಸವದ ವಿವಿಧ ಸ್ಪರ್ಧೆಗಳ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ‘ಅಷ್ಟಮಿದ ಪಿಲಿಗೊಬ್ಬು’ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ. ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ‘ಬೆದ್ರದ ಕೃಷ್ಣೋತ್ಸವ 2026’ರಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಜವನೆರ್ ಬೆದ್ರ ಫೌಂಡೇಶನ್ ಸ್ಥಾಪಕ ಅಮರ್ ಕೋಟೆ ತಿಳಿಸಿದ್ದಾರೆ.