ಮೂಡುಬಿದಿರೆ: ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಂಡು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸುವ ಉದ್ದೇಶದಿಂದ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲಾಗಿದೆ.

ಇ-ಕೆವೈಸಿ ಪ್ರಕ್ರಿಯೆ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಇ-ಕೆವೈಸಿ ಪೂರ್ಣಗೊಳಿಸಿ ಐದು ವರ್ಷಗಳು ಕಳೆದಿರುವ ಸದಸ್ಯರ ಪಟ್ಟಿಯನ್ನು ಸಿದ್ಧಪಡಿಸಿ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಿಗೆ ನೀಡಲಾಗಿದೆ. ಪಟ್ಟಿಯಲ್ಲಿರುವ ಸದಸ್ಯರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯವಾಗಿ ನವೀಕರಿಸಬೇಕಾಗಿದೆ.

ತಮ್ಮ ವ್ಯಾಪ್ತಿಯ ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ.

ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಇ-ಪೋಸ್ ಸಾಧನದಲ್ಲಿ ಬೆರಳಚ್ಚು ನೀಡುವ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ದಕ್ಷಿಣ ಕನ್ನಡ ಮನವಿ ಮಾಡಿದೆ.