ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡಬಿದಿರೆ ಮಂಡಲದ ವ್ಯಾಪ್ತಿಯಲ್ಲಿ ಹರ್ ಘರ್ ತಿರಂಗ ಅಭಿಯಾನವನ್ನು ನಡೆಸುವಂತೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪ್ರಭಾರಿಗಳಿಗೆ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ಮನವಿ ಮಾಡಿದ್ದಾರೆ.

ತಮ್ಮ ಮಹಾಶಕ್ತಿ ಕೇಂದ್ರ ವ್ಯಾಪ್ತಿಗೆ ಬರುವ ಎಲ್ಲ ಬೂತ್‌ಗಳಲ್ಲೂ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಸಾರ್ವಜನಿಕರಿಗೆ ತಿಳಿಸಬೇಕು. ಧ್ವಜ ಹಾರಿಸಿದ ಬಳಿಕ ಅದರ ಫೋಟೋ ತೆಗೆದು ಸರಳ ಆಪ್‌ನಲ್ಲಿ ಅಪ್ಲೋಡ್ ಮಾಡುವಂತೆ ಸೂಚಿಸಬೇಕು ಎಂದು ದಿನೇಶ್ ಪುತ್ರನ್ ತಿಳಿಸಿದ್ದಾರೆ.

ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪ್ರಭಾರಿಗಳು ತಮ್ಮ ವ್ಯಾಪ್ತಿಯ ಎಲ್ಲ ಬೂತ್‌ಗಳಲ್ಲೂ ಅಭಿಯಾನಕ್ಕೆ ಅಗತ್ಯವಾದ ಮಾಹಿತಿ ನೀಡಿ, ಜನರನ್ನು ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಮನವಿ ಮಾಡಲಾಗಿದೆ.

ದೇಶದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನದ ಮೂಲಕ ಪ್ರತಿಯೊಂದು ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸುವ ಉದ್ದೇಶವನ್ನು ಅಭಿಯಾನ ಹೊಂದಿದೆ.