ಮೂಡುಬಿದಿರೆ: ಆಟೋರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೂಡುಬಿದಿರೆ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಡಿ. ಶೆಟ್ಟಿ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಪೊಲೀಸ್ ಉಪನಿರೀಕ್ಷಕ ಪ್ರತಿಭಾ ಕೆ.ಸಿ. ಹಾಗೂ ಉದ್ಯಮಿ ಹೈದರ್ ಅಲಿ ಸಂಗಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಅಧ್ಯಕ್ಷ ದೀಪಕ್ ರಾಜ್, ಭೂಮಿ ಎಸ್. ಶೆಟ್ಟಿ, ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.