ಮೂಡುಬಿದಿರೆ: ದೇಶಪ್ರೇಮವೆಂದರೆ ಕೇವಲ ದೇಶವನ್ನು ಪ್ರೀತಿಸುವುದಲ್ಲ; ದೇಶದ ಗೌರವ, ಏಕತೆ ಮತ್ತು ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯೂ ಹೌದು ಎಂಬ ಸಂದೇಶದೊಂದಿಗೆ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಹೋಲಿ ಏಂಜಲ್ಸ್ ಕನ್ನಡ ಮಾಧ್ಯಮ ಶಾಲೆ, ಶಿರ್ತಾಡಿ ಇವರ ಸಹಭಾಗಿತ್ವದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಿವಿಲ್, ಕ್ರಿಮಿನಲ್ ಹಾಗೂ ಕಂದಾಯ ವ್ಯವಹಾರಗಳ ವಕೀಲರಾದ ಅಡ್ವೊಕೇಟ್ ದಕ್ಷ ಡಿ. ಜೈನ್ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಧ್ವಜ ಹಾರುತ್ತಿದ್ದಂತೆ ನೆರೆದಿದ್ದವರಲ್ಲಿ ದೇಶಾಭಿಮಾನ ಮತ್ತು ದೇಶಪ್ರೇಮದ ಭಾವನೆ ಮೂಡಿತು.
ಉಭಯ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳ ಮನಮೋಹಕ ಪ್ರದರ್ಶನಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ಈ ಸಂದರ್ಭದಲ್ಲಿ ಉಭಯ ಶಾಲೆಗಳ ಜಂಟಿ ಕಾರ್ಯದರ್ಶಿಗಳಾದ ಫಾದರ್ ಸಿಲ್ವಿಸ್ಟರ್ ವಿನ್ಸೆಂಟ್ ಲೋಬೊ, ಉಭಯ ಶಾಲೆಗಳ ಮುಖ್ಯೋಪಾಧ್ಯಾಯಿನಿಯರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ವಂದಿಸಿದರು.