ಮೂಡುಬಿದಿರೆ: ಇಲ್ಲಿನ ಪುರಸಭೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣ ಗೈದರು. ಪುರಸಭೆಯ ಮಾಜಿ ಅಧ್ಯಕ್ಷ ಜಯಶ್ರೀ ಕೇಶವ್, ಮಾಜಿ ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ., ಪರಿಸರ ಅಭಿಯಂತರ ಶಿಲ್ಪಾ, ಆರೋಗ್ಯ ನಿರೀಕ್ಷಕಿ ಶಶಿರೇಖಾ ಸಹಿತ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.