ಮೂಡುಬಿದಿರೆ: ನಿಡ್ಡೋಡಿಯ ಜ್ಞಾನರತ್ನ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ, ಗೌರವದೊಂದಿಗೆ ಆಚರಿಸಲಾಯಿತು.
ನಿವೃತ್ತ ಯೋಧ ರಾಜೇಶ್ ಎಂ. ಕೆ. L ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ದೇವಸ್ಯ ವಹಿಸಿದ್ದರು.
ಟ್ರಸ್ಟ್ ಕಾರ್ಯದರ್ಶಿ ಸಂಗೀತಾ ಭಾಸ್ಕರ್ ದೇವಸ್ಯ, ಟ್ರಸ್ಟಿ ವೈಶಾಲಿ, ಎಸ್‌ಡಿಎಂಸಿ ಅಧ್ಯಕ್ಷೆ ಪಾವನ, ಆಡಳಿತಾಧಿಕಾರಿ ಸಾಗರ್, ಪ್ರಾಂಶುಪಾಲೆ ಅನುರಾಧಾ ಎಸ್. ಸಾಲ್ಯಾನ್, ಮುಖ್ಯ ಶಿಕ್ಷಕಿ ಸೀಮಾ ಹಾಗೂ ಸಹ ಮುಖ್ಯ ಶಿಕ್ಷಕಿ ಜಯಶ್ರೀ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ದೇಶಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರದರ್ಶನಗಳು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ಸಾರಿದವು.