ಮೂಡುಬಿದಿರೆ: ಪಾಲಡ್ಕ ಸಂತ ಇಗ್ನೇಷಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಸಂಚಾಲಕ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಪಾವ್ಲ್ ಕ್ರಾಸ್ತಾ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಶಾಲೆಯ ವಿವಿಧ ದಳಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿಜೇತರಾದ 9ನೇ ತರಗತಿಯ ಶರಣ್ ಹಾಗೂ 6ನೇ ತರಗತಿಯ ಶ್ರಾವ್ಯ ಅವರನ್ನು ಪಾವ್ಲ್ ಕ್ರಾಸ್ತಾ ಗೌರವಿಸಿ ಅಭಿನಂದಿಸಿದರು.

8ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಪಿ.ಬಿ. ಸ್ವಾತಂತ್ರ್ಯದ ಕುರಿತು ಭಾಷಣ ಮಾಡಿದರು. ಮುಖ್ಯ ಶಿಕ್ಷಕಿ ಜೆಸಿಂತ ಸಿಕ್ವೇರಾ ಸ್ವಾಗತಿಸಿದರು. ಶಿಕ್ಷಕಿ ದಿವ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಪ್ರೀಮಾ ವಂದಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು, ಶಾಲಾ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷರು ಹಾಗೂ ಸದಸ್ಯರು, ಚರ್ಚ್ ಭಕ್ತಾದಿಗಳು, ಶಿಕ್ಷಕರು, ಶಿಕ್ಷಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.