ಮೂಡುಬಿದಿರೆ: ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಗಣನಾಥ್ ಶೆಟ್ಟಿ, ಸ್ವಾತಂತ್ರ್ಯ ಕೇವಲ ಹಕ್ಕು ಮಾತ್ರವಲ್ಲ, ಜವಾಬ್ದಾರಿಯೂ ಆಗಿದೆ. ಹಿರಿಯರು ತ್ಯಾಗ ಬಲಿದಾನದಿಂದ ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳದೆ ಭಾರತೀಯ ಪ್ರಜೆಗಳಾದ ನಾವು ಸದ್ಬಳಕೆ ಮಾಡಿಕೊಂಡು ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಕರೆ ನೀಡಿದರು. ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಹೆಗಡೆ ಮಾತನಾಡಿ, ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರಲಾಂಛನ ಹಾಗೂ ದೇಶದ ಸಂವಿಧಾನವನ್ನು ಗೌರವಿಸುವುದು ನಮ್ಮ ಕರ್ತವ್ಯ. ಭಾರತ ಇಂದು ಎಲ್ಲ ಕ್ಷೇತ್ರಗಳಲ್ಲೂ ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ದೇಶದ ಭವಿಷ್ಯದ ರೂವಾರಿಗಳಾಗಿರುವ ಯುವಜನತೆ ದೇಶದ ಪ್ರಗತಿಗೆ ಸಹಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ತ್ರಿಶಾ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಕಾರ್ತಿಕ್ ಭಂಡಾರಿ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಭವ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬಳಿಕ ಗೋಲ್ಡನ್ ಟ್ರ್ಯಾಕ್ಸ್ ಬ್ರಹ್ಮಾವರದ ಲಿಂಗಪ್ಪ ಮತ್ತು ತಂಡದವರಿಂದ ‘ಕ್ರಿಯೇಟಿವ್ ಸವಿಗಾನ’ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಹಾಗೂ ಸದಭಿರುಚಿಯ ಗೀತಗಾಯನ ನಡೆಯಿತು. ಕಾರ್ಯಕ್ರಮಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
'ಖೇಲ್ ಧವಳಾ’- ಗ್ರಾಮೀಣ ಕ್ರೀಡಾಕೂಟ :ಧವಳಾ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಬೆಳುವಾಯಿಯಲ್ಲಿ ಆಗಸ್ಟ್ 22ರಂದು ‘ಕೆಸರಲ್ಲೊಂದು ದಿನ 2026’
ಮೂಡುಬಿದಿರೆ: ದಿಗಂಬರ ಜೈನ ವಿದ್ಯಾವರ್ಧಕ ಸಂಘ ಆಡಳಿತಕ್ಕೊಳಪಟ್ಟ ಶ್ರೀ ಧವಳಾ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ‘ಖೇಲ್ ಧವಳಾ’ ಗ್ರಾಮೀಣ ಕ್ರೀಡಾಕೂಟ ‘ಕೆಸರಲ್ಲೊಂದು ದಿನ – 2026’ ಆಗಸ್ಟ್ 22ರಂದು ಬೆಳುವಾಯಿಯಲ್ಲಿ ಆಯೋಜಿಸಲಾಗಿದೆ.
ಮೂಡುಬಿದಿರೆ ಗಾಂಧಿನಗರ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮೂಡುಬಿದಿರೆ: ಗಾಂಧಿನಗರದ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ವಿಜಯ ಶೆಟ್ಟಿ ಅಜಾರುಗುತ್ತು ಕಟೀಲು ಧ್ವಜಾರೋಹಣ ನೆರವೇರಿಸಿದರು.
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಯುವಜನತೆ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು- ಸದಾಶಿವ ಪ್ರಭು
ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮಾಜಿ ಸೈನಿಕ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಸದಾಶಿವ ಪ್ರಭು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.