ಮೂಡುಬಿದಿರೆ: 80ನೇ ಸ್ವಾತಂತ್ರೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳು ಹಾಗೂ ಸಿಹಿತಿಂಡಿ ವಿತರಣಾ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆಯ ವಕೀಲ ಜಯಪ್ರಕಾಶ್ ಭಂಡಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಿಲಾಗ್ರಿಸ್ ಸಂಸ್ಥೆಯ ಶಾಖಾ ವ್ಯವಸ್ಥಾಪಕ ಪ್ರಕಾಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಿಲಾಗ್ರಿಸ್ ಸಂಸ್ಥೆಯ ವಸೂಲಾತಿ/ಮಾರಾಟ ಅಧಿಕಾರಿ ಗೌತಮ್ ರೈ, ಪ್ರಜ್ಞಾ ಸಂಸ್ಥೆಯ ಮೇಲ್ವಿಚಾರಕಿ ಶರಣ್ಯ ಹಾಗೂ ಸಮಾಲೋಚಕಿ ವಿದ್ಯಾಲಕ್ಷ್ಮೀ ಉಪಸ್ಥಿತರಿದ್ದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.