ಮೂಡುಬಿದಿರೆ: ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಏಳು ಬಾರಿ ನಿರ್ದೇಶಕಿಯಾಗಿರುವ ವಿಶಾಲಾಕ್ಷಿ ಧ್ವಜಾರೋಹಣ ನೆರವೇರಿಸಿದರು.

ಮೂಡುಬಿದಿರೆ: ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಏಳು ಬಾರಿ ನಿರ್ದೇಶಕಿಯಾಗಿರುವ ವಿಶಾಲಾಕ್ಷಿ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಹಿರಿಯರಾದ ವರದರಾಯ ಕಾಮತ್, ಜಗತ್ಪಾಲ್ ಭಂಡಾರಿ ಮತ್ತು ಪ್ರಭಾಕರ ರಾವ್ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿದರು. ಸಂಸ್ಥೆಯ ಅಧ್ಯಕ್ಷ ಕೇಶವ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯನಿರ್ವಾಹಣಾಧಿಕಾರಿ ಮಲ್ಲಿಕಾ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.