ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಧ್ವಜಾರೋಹಣಗೈದು ಮಾತನಾಡಿ, ನಾವಿಂದು ಸ್ವಾಭಿಮಾನದಿಂದ ಬದುಕಲು ಹಾಗೂ ದೇಶದಲ್ಲಿ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಲು ಸ್ವಾತಂತ್ರ್ಯದ ಪರಿಕಲ್ಪನೆಯೇ ಕಾರಣವಾಗಿದೆ ಎಂದರು.
ಮೊದಲಿಗೆ ಅಮೇರಿಕಾ ಸ್ವಾತಂತ್ರ್ಯವನ್ನು ಪಡೆಯಿತು. ನಮ್ಮ ದೇಶದಲ್ಲಿ ಮಹಾತ್ಮಗಾಂಧಿ, ನೆಹರು ಮತ್ತು ವಲ್ಲಭಬಾಯಿ ಪಟೇಲ್ ಅವರು ಸುಶಿಕ್ಷಿತರಾಗಿದ್ದರಿಂದ ದೇಶ ಅಭಿವೃದ್ಧಿ ಹೊಂದಬೇಕಾದರೆ ಸ್ವಾತಂತ್ರ್ಯ ಅಗತ್ಯ ಎಂಬ ಅರಿವು ಅವರಲ್ಲಿತ್ತು. ಈ ಅರಿವಿನಿಂದಲೇ ಸ್ವಾತಂತ್ರ್ಯ ಪಡೆದುಕೊಳ್ಳಲು ಸಾಧ್ಯವಾಯಿತು ಎಂದು ಕೆ. ಅಭಯಚಂದ್ರ ಜೈನ್ ಹೇಳಿದರು.ಸ್ವಾತಂತ್ರ್ಯ ಸಿಕ್ಕಿದ ನಂತರ ಮೊದಲ ಬಾರಿಗೆ ಸಮಾಜ ಮಂದಿರವು ಗೌರವಯುತವಾಗಿ ಧ್ವಜಾರೋಹಣವನ್ನು ಮಾಡಿದೆ ಎಂದು ಅವರು ತಿಳಿಸಿದರು.
ಚೌಟರ ಅರಮನೆಯ ಕುಲದೀಪ ಎಂ., ಸಮಾಜ ಮಂದಿರ ಸಭಾದ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಟ್ರಸ್ಟಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
ಸಮಾಜ ಮಂದಿರ ಸಭಾದ ಕಾರ್ಯದರ್ಶಿ ಸುರೇಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.