ಮೂಡುಬಿದಿರೆ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಎಸ್‌ಎನ್‌ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಅಂತರ್ ವಿಭಾಗ ಮಟ್ಟದ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟವನ್ನು ಕಾಲೇಜು ಮೈದಾನದಲ್ಲಿ ಆಯೋಜಿಸಲಾಯಿತು.

ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲರಾದ ನೊರೊನ್ಹಾ ತರೀನಾ ರೀಟಾ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಚಾಲನೆ ನೀಡಿದರು. ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ತಂಡದ ಒಗ್ಗಟ್ಟು ಹಾಗೂ ದೈಹಿಕ ಕ್ಷಮತೆಯನ್ನು ಬೆಳೆಸುವ ಉದ್ದೇಶದಿಂದ ಪಂದ್ಯಾಟವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ಉಪನ್ಯಾಸಕರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ ಪಾಲಡ್ಕ ಉಪಸ್ಥಿತರಿದ್ದರು.