ಮೂಡುಬಿದಿರೆ: ಇಂದಿನ ದಿನಗಳಲ್ಲಿ ನಮ್ಮ ಸುತ್ತಲಿನ ಪರಿಸರದಲ್ಲೇ ಅಪಾರ ಮಾಹಿತಿಯಿದ್ದು, ಅದನ್ನು ಅರಿಯಲು ಸದಾ ಮೊಬೈಲ್ ಅಥವಾ ಇಂಟರ್ನೆಟ್ ಅವಶ್ಯಕವಿಲ್ಲ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ವಸ್ತುಗಳನ್ನು ಗಮನಿಸುವ ಮೂಲಕವೇ ಬಹಳಷ್ಟು ಕಲಿಯಬಹುದು ಎಂದು ಮಾಹೆಯ ಸೌರ ಭೌತಶಾಸ್ತ್ರ ಸಂಶೋಧಕ ಅತುಲ್ ಭಟ್ ಹೇಳಿದರು. ಆಳ್ವಾಸ್ ಶಾಲೆ ಆಯೋಜಿಸಿದ್ದ ‘ಖಗೋಳಶಾಸ್ತ್ರ ಬೇಸಿಗೆ ಶಿಬಿರ 2026’ ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಚಿಕ್ಕ ವಯಸ್ಸಿನಿಂದಲೇ ಆಕಾಶವನ್ನು ಅನ್ವೇಷಿಸುವುದು ಒಳ್ಳೆಯ ಹವ್ಯಾಸ. ಆಕಾಶ ಮತ್ತು ಸಮುದ್ರದಲ್ಲಿ ಅನ್ವೇಷಿಸಲು ಇನ್ನೂ ಅನೇಕ ವಿಷಯಗಳಿದ್ದು, ಲಭ್ಯವಿರುವ ಅಪಾರ ಅವಕಾಶಗಳನ್ನು ಬಳಸಿಕೊಳ್ಳುವುದು ನಮ್ಮ ಕೈಯಲ್ಲಿದೆ ಎಂದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿ ನಾಸಾ ವಿಜ್ಞಾನಿ ಪ್ರಕೃತಿ ಪ್ರಕಾಶ್, ಶಾಲಾ ಪ್ರಾಂಶುಪಾಲರು ಶೈಲಜಾ ಬೋಳ ಹೆಗ್ಡೆ, ಶಾಲಾ ಆಡಳಿತ ಅಧಿಕಾರಿ ನಿತೇಶ್ ಮಾರ್ನಾಡ್, ಸಹಾಯಕ ಆಡಳಿತ ಅಧಿಕಾರಿ ರಾಜೇಶ್, ಕಾರ್ಯಕ್ರಮ ಸಂಯೋಜಕರು ಸೌಮ್ಯ ಆದಿತ್ಯ ಮತ್ತು ಅಶ್ವಿನಿ ಪ್ರಭು ಉಪಸ್ಥಿತರಿದ್ದರು. ನಿಶಾ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.