ಮೂಡುಬಿದಿರೆ: ಸಾವಿರ ಕಂಬಗಳ ಬಸದಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ವಿಶೇಷ ವಿದ್ಯುತ್ ದೀಪಾಲಂಕಾರ ಕಾರ್ಯಕ್ರಮಕ್ಕೆ ಸುಮಾರು 3,000 ಜನರು ಆಗಮಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿ ಭಾಗವಹಿಸಿದ ಹಾಗೂ ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಜೈನ ಕಾಶಿ ಟ್ರಸ್ಟ್, ಮೂಡುಬಿದಿರೆ ವತಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.

ಮುಂದಿನ ದಿನಗಳಲ್ಲಿ ಇದೇ ರೀತಿಯ ವಿಶೇಷ ವಿದ್ಯುತ್ ದೀಪಗಳ ಅಲಂಕಾರವನ್ನು ಪ್ರತಿ ಭಾನುವಾರ ಸಂಜೆ 7ರಿಂದ 8 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆಯುವ ಯೋಜನೆಯನ್ನು ಜೈನ ಕಾಶಿ ಟ್ರಸ್ಟ್ ಹೊಂದಿದೆ.

ಸಾರ್ವಜನಿಕರು ಪ್ರತಿ ಭಾನುವಾರ ಸಂಜೆ 7ರಿಂದ 8 ಗಂಟೆಯವರೆಗೆ ವಿಶೇಷ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸುವ ಉದ್ದೇಶವನ್ನು ಟ್ರಸ್ಟ್ ಹೊಂದಿದೆ.