ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟೌನ್ ಮತ್ತು ಸೀನಿಯರ್ ಚೇಂಬರ್ ಮೂಡುಬಿದಿರೆ ವತಿಯಿಂದ 18 ಬಸದಿಗಳ ಮೊಕ್ತೇಸರರಾಗಿದ್ದ ಆನಡ್ಕ ದಿನೇಶ್ ಕುಮಾರ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ಸಮಾಜ ಮಂದಿರ ಸಭಾದಲ್ಲಿ ಸಂಘಟಿಸಲಾಯಿತು. ಚೌಟರ ಅರಮನೆಯ ಕುಲದೀಪ್ ಎಂ, ಪ್ರತಾಪ್ ಕುಮಾರ್, ಅಬುಲ್ ಅಲಾ ಪುತ್ತಿಗೆ, ನಿತೇಶ್ ಬಲ್ಲಾಳ್, ರೋಟರಿ ಕ್ಲಬ್ ಸಹಾಯಕ ಗವರ್ನರ್ ಫೆಡ್ರಿಕ್ ರಾಕ್ವೀನ್ ಲೋಬೊ ಮತ್ತು ರಶ್ಮಿತಾ ಯುವರಾಜ್ ಜೈನ್ ಮೃತರಿಗೆ ನುಡಿನಮನ ಸಲ್ಲಿಸಿದರು. ರೋಟರಿ ಅಧ್ಯಕ್ಷ ಕರುಣಾಕರ ಜೈನ್ ಹಾಗೂ ಸೀನಿಯರ್ ಚೇಂಬರ್ ಅಧ್ಯಕ್ಷ ಚಂದ್ರಹಾಸ ದೇವಾಡಿಗ ಉಪಸ್ಥಿತರಿದ್ದರು. ಮೃತರ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸಿ, ಮೌನ ಪ್ರಾರ್ಥನೆ ಸಲ್ಲಿಸಲಾಯಿತು.ವಿನಯಚಂದ್ರ ಕಾರ್ಯಕ್ರಮ ನಿರ್ವಹಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.