ಮೂಡುಬಿದಿರೆ: ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಮೂಡುಬಿದಿರೆ ಪದ್ಮಶ್ರೀ ಸ್ಟುಡಿಯೋ ಮಾಲಕ ಅಭಯ್ ಕುಮಾರ್ ಅವರಿಗೆ ‘ಛಾಯಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ, ಬ್ರಹ್ಮಾವರ ವಲಯದ ಬೆಳ್ಳಿ ಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ನಡೆಯಿತು. ರೋಟರಿ ಬ್ರಹ್ಮಾವರ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ವಿಶ್ವ ಛಾಯಾಗ್ರಹಣ ದಿನಾಚರಣೆ ಸಮಾರಂಭದಲ್ಲಿ ಅಭಯ್ ಕುಮಾರ್ ಅವರಿಗೆ ‘ಛಾಯಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.