ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತಿಯ ಮಾಜಿ ಸದಸ್ಯೆ, ಕಾಪಿಕಾಡು ಹಂಡೇಲು ನಿವಾಸಿ ಜಲಜ ಕುಲಾಲ್ (65) ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಮಧ್ಯಾಹ್ನ ನಿಧನರಾದರು. ಜಲಜ ಕುಲಾಲ್ ಅವರು ಪುತ್ರ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪುತ್ತಿಗೆ ಗ್ರಾಮಕ್ಕೆ ₹1 ಕೋಟಿ ಡಿಆರ್ಇ ಯೋಜನೆ: ಸೌರ ವಿದ್ಯುತ್ನಿಂದ ಗ್ರಾಮಾಭಿವೃದ್ಧಿಗೆ ಹೊಸ ರೂ
ಮೂಡುಬಿದಿರೆ: ಮಾದರಿ ಸೋಲಾರ್ ಗ್ರಾಮ ಯೋಜನೆಗೆ ಆಯ್ಕೆಯಾಗಿರುವ ಪುತ್ತಿಗೆ ಗ್ರಾಮ ಪಂಚಾಯಿತಿಗೆ ಲಭಿಸಿರುವ ಸುಮಾರು ₹1 ಕೋಟಿ ಅನುದಾನವನ್ನು ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಸಮರ್ಪಕವಾಗಿ ಬಳಸುವ ಕುರಿತು ಶುಕ್ರವಾರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.