ಮೂಡುಬಿದಿರೆ: ದಿಗಂಬರ ಜೈನ ವಿದ್ಯಾವರ್ಧಕ ಸಂಘ ಆಡಳಿತಕ್ಕೊಳಪಟ್ಟ ಶ್ರೀ ಧವಳಾ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ‘ಖೇಲ್ ಧವಳಾ’ ಗ್ರಾಮೀಣ ಕ್ರೀಡಾಕೂಟ ‘ಕೆಸರಲ್ಲೊಂದು ದಿನ – 2026’ ಆಗಸ್ಟ್ 22ರಂದು ಬೆಳುವಾಯಿಯಲ್ಲಿ ಆಯೋಜಿಸಲಾಗಿದೆ.
ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಅಭಿಜಿತ್ ಎಂ ಉದ್ಘಾಟಿಸಲಿದ್ದಾರೆ. ಶ್ರೀ ಧವಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಾರ್ಶ್ವನಾಥ ಅಜ್ರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಡಿ.ಜೆ.ವಿ. ಸಂಘದ ಸಂಚಾಲಕ ಕೆ. ಹೇಮರಾಜ್ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಮೂಡುಬಿದಿರೆ ಭೂ ನ್ಯಾಯ ಮಂಡಳಿ ಸದಸ್ಯ ಹಾಗೂ ಹಳೆ ವಿದ್ಯಾರ್ಥಿ ರಮೇಶ್ ಶೆಟ್ಟಿ, ಕಾಂತಾವರ ಜಗದೀಶ್ ಅಂಚನ್ ಮತ್ತು ಬೆಳುವಾಯಿ ಕೃಷಿಕ ಸುದೇಶ್ ಬೆಳುವಾಯಿ ಉಪಸ್ಥಿತರಿರಲಿದ್ದಾರೆ.
ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್ ರಾಜ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಅವಿನಾಶ್, ಕ್ರೀಡಾ ಕಾರ್ಯದರ್ಶಿ ಪ್ರತ್ವಿಕ್, ಕ್ರೀಡಾ ಜೊತೆ ಕಾರ್ಯದರ್ಶಿ ಪ್ರಥಮ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.