ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್‌ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ.
ಸಾಯಂಕಾಲ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವ ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಸುದರ್ಶನ್ ಎಂ, ಫಾರ್ಚೂನ್ ಪ್ರಮೋಟರ್ಸ್ ಪಾಲುದಾರ ಅಬುಲ್ ಅಲಾ ಪುತ್ತಿಗೆ, ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ, ಅಂತಾರಾಷ್ಟ್ರೀಯ ಪ್ರಮಾಣಿತ ತರಬೇತುದಾರ, ಸಂಘಟನಾ ಕಾರ್ಯದರ್ಶಿ ಸ್ವಾಮಿ ಪ್ರಸಾದ್ ಮೂಡುಬಿದಿರೆ, ಮೂಡುಬಿದಿರೆ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಅಕ್ಷತಾ, ಉಳ್ಳಾಲ ತಾಲೂಕು ಸಜಿಪನಾಡು ನೂರಿಯಾ ಪಬ್ಲಿಕ್ ಶಾಲೆಯ ಸಂಚಾಲಕ ಅಬ್ದುಲ್ ಅಜೀಜ್ ಕುನ್ನಿಲ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಕರಾಟೆ ಶಿಕ್ಷಕರ ಸಂಘದ ಉಪಾಧ್ಯಕ್ಷ ಸತೀಶ್ ಬೆಲ್ಮನ್, ಸದಸ್ಯ ರವಿ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ರಾಹುಲ್ ಟಿ.ಜಿ. ಮಂಗಳೂರು, ಉದ್ಯಮಿ ಅರುಣ್ ಕುಮಾರ್ ನಿಟ್ಟೆ ಹಾಗೂ ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಮತ್ತು ಶೋರಿನ್ ರಿಯು ಕರಾಟೆ ಅಸೋಸಿಯೇಷನ್ ಮುಖ್ಯ ತರಬೇತುದಾರ ರೆನ್ಶಿ ಮಹಮ್ಮದ್ ನದೀಮ್ ಉಪಸ್ಥಿತರಿರಲಿರುವರು.