ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನ, ಅಲಂಗಾರು ಅರ್ಚಕ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿ, ಮೂಡುಬಿದಿರೆಯ ಗಣೇಶೋತ್ಸವಕ್ಕೆ ದೇಶದಲ್ಲೇ ವಿಶೇಷ ಹೆಸರಿದ್ದು, ಅಮರನಾಥ ಶೆಟ್ಟರು ರೂಪಿಸಿದ ಪರಂಪರೆಯನ್ನು ಮುಂದುವರಿಸುವಲ್ಲಿ ಪವರ್ ಫ್ರೆಂಡ್ಸ್ ಸಂಸ್ಥೆಯೂ ಪ್ರಮುಖ ಪಾತ್ರ ವಹಿಸುತ್ತಿದೆ. ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯಕ್ಕೆ ಕೈಜೋಡಿಸುವುದು ಪುಣ್ಯದ ಕೆಲಸವಾಗಿದ್ದು, ಈ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಪವರ್ ಫ್ರೆಂಡ್ಸ್ ಕೊಡುಗೆ ನೀಡುತ್ತಿದೆ. ಇಂದಿನ ದಿನಗಳಲ್ಲಿ ಕುಟುಂಬ ವ್ಯವಸ್ಥೆಯಲ್ಲಿ ಬಿರುಕುಗಳು ಹೆಚ್ಚಾಗುತ್ತಿದ್ದು, ಬಾಂಧವ್ಯ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸ್ನೇಹಿತರನ್ನು ಕುಟುಂಬದಂತೆ ಒಗ್ಗೂಡಿಸುವ ಕಾರ್ಯ ಪವರ್ ಫ್ರೆಂಡ್ಸ್ ಮೂಲಕ ನಡೆಯುತ್ತಿದೆ ಎಂದರು.

ಪವರ್ ಫ್ರೆಂಡ್ಸ್ ಅಧ್ಯಕ್ಷ ವಿನಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಪವರ್ ಫ್ರೆಂಡ್ಸ್ ಮೂಡುಬಿದಿರೆಯ ಸಮಸ್ತ ಜನತೆಯ ಸಂಘಟನೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರದ ಹಲವು ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಪವರ್ ಫ್ರೆಂಡ್ಸ್ ಪ್ರಮುಖ ಪಾತ್ರ ವಹಿಸಿದೆ. ಪವರ್ ಫ್ರೆಂಡ್ಸ್ ಮೂಡುಬಿದಿರೆಯ ಸಮಸ್ತ ಜನತೆಯ ಸಂಘಟನೆ ಮೂಡುಬಿದಿರೆ: ಪವರ್ ಫ್ರೆಂಡ್ಸ್ ಕಾರ್ಯಕ್ರಮ ಸಂಘಟನೆಯದ್ದಲ್ಲ, ಮೂಡುಬಿದಿರೆಯ ಸಮಸ್ತ ಜನತೆಯ ಕಾರ್ಯಕ್ರಮ ಎಂದು ಭಾಷಣಕಾರರು ಹೇಳಿದರು. ಕಳೆದ ಐದು ವರ್ಷಗಳಲ್ಲಿ ಸರ್ಕಾರದ ಹಲವು ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಪವರ್ ಫ್ರೆಂಡ್ಸ್ ಪ್ರಮುಖ ಪಾತ್ರ ವಹಿಸಿದೆ. ಯುವಕರು ಸಮಾಜದ ಮುಖ್ಯವಾಹಿನಿಗೆ ಬಂದು ಸಮಾಜದೊಂದಿಗೆ ಬೆರೆತಾಗ ಪರಿವರ್ತನೆ ಸಾಧ್ಯ ಎಂದರು.

ಪವರ್ ಫ್ರೆಂಡ್ಸ್ ಪ್ರಶಸ್ತಿ ಪ್ರದಾನ : ನಿವೃತ್ತ ಶಿಕ್ಷಕ ನಾರಾಯಣ ನಾಯಕ್, ಅಂತಾರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಧನಲಕ್ಷ್ಮೀ ಪೂಜಾರಿ, ರಕ್ತದಾನಿ ಮನು ಒಂಟಿಕಟ್ಟೆ, ಪ್ರತಿಭಾನ್ವಿತ ವಿದ್ಯಾರ್ಥಿ ಸುಹಾಸ್ ಹರೀಶ್ ಹೆಗ್ಡೆ, ಸಾಮಾಜಿಕ ಚಟುವಟಿಕೆಯಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಎಡಪದವು ಭಜರಂಗದಳ ಸೇವಾ ಬ್ರಿಗೇಡ್ ಅವರಿಗೆ ಪವರ್ ಫ್ರೆಂಡ್ಸ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ವಕೀಲರ ಸಂಘ, ಮೂಡುಬಿದಿರೆ ಅಧ್ಯಕ್ಷ ಶರತ್ ಜಿ. ಶೆಟ್ಟಿ, ರೋಟರಿ ಝೋನ್ 4, ಡಿಸ್ಟ್ರಿಕ್ಟ್ 3181ರ ಅಸಿಸ್ಟೆಂಟ್ ಗವರ್ನರ್ ಶ್ರೀಕಾಂತ್ ಕಾಮತ್, ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಅಧ್ಯಕ್ಷ ಡೇನಿಸ್ ಪಿರೇರಾ, ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಿ ಡಾ. ಅಮರಶ್ರೀ ಅಮರನಾಥ್ ಶೆಟ್ಟಿ, ಇನ್ನರ್ ವೀಲ್ ಕ್ಲಬ್, ಮೂಡುಬಿದಿರೆ ಅಧ್ಯಕ್ಷೆ ನಿಶ್ಮಿತಾ ಶೀನಪ್ಪ, ವೈಬ್ರೆಂಟ್ ಎಜುಕೇಶನ್- ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಡಾ. ಎಸ್. ಎಲ್. ವೆಂಕಟೇಶ್ ನಾಯಕ್, ಉದ್ಯಮಿಗಳಾದ ಅಬು ಅಲಾ ಪುತ್ತಿಗೆ ಹಾಗೂ ಸಂದೀಪ್ ಶೆಟ್ಟಿ ಭಾಗವಹಿಸಿದ್ದರು.. ಸಂಘಟನೆಯ ಉಪಾಧ್ಯಕ್ಷ ಜಯಪ್ರಕಾಶ್ ಭಂಡಾರಿ ಸ್ವಾಗತಿಸಿದರು. ಕೋಶಾಧಿಕಾರಿ ಗುರುಪ್ರಸಾದ್ ವರದಿ ವಾಚಿಸಿದರು. ಶಂಕರ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಸುಧಾಕರ್ ಶೆಟ್ಟಿ ವಂದಿಸಿದರು.

ಅನಿಶ್ ಅವರ ನಿರ್ದೇಶನದಲ್ಲಿ ನಿರ್ದೇಶನದ ಎಂ. ಜೆ ಸ್ಟೆಪ್ ಅಪ್ ತಂಡದ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಹಾಗೂ ಗಾಯಕಿ ಮಹಿಮಾ ಹಾಗೂ ಪವನ್ ಮಾರ್ನಡ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಸಂದೀಪ್ ಶೆಟ್ಟಿ ರಾಯಿ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮವನ್ನು ನಿರೂಪಿಸಿದರು.