ಮೂಡುಬಿದಿರೆ: ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಮತ್ತು ನಾರಾಯಣ ಗುರು ಮಹಿಳಾ ಘಟಕದ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಆ.21ರಂದು ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಕಂದೀರು ಶ್ರೀ ಸೋಮನಾಥ ಶಾಂತಿಯವರ ಪೌರೋಹಿತ್ಯದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಘಟಕ, ಉಪಸಮಿತಿ, ಗ್ರಾಮ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಸದ್ಭಕ್ತವೃಂದ ಉಪಸ್ಥಿತರಿದ್ದರು. ಪೂಜೆಯ ಬಳಿಕ ಅನ್ನಪ್ರಸಾದವನ್ನು ಸ್ವೀಕರಿಸಿದರು.