ಮೂಡುಬಿದಿರೆ: ಜೈನ ಕಾಶಿಯ ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯು ಆಗಸ್ಟ್ 20ರಿಂದ ಪ್ರತಿ ಭಾನುವಾರ ಸಂಜೆ 7ರಿಂದ 8ರವರೆಗೆ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸಲಿದ್ದು, ಈ ಅವಧಿಯಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಜೈನ್ ಕಾಶಿ ಟ್ರಸ್ಟ್ ತಿಳಿಸಿದೆ. ಪ್ರತಿ ಭಾನುವಾರ ಸಂಜೆ 7ರಿಂದ 8ರವರೆಗೆ ಸಾವಿರ ಕಂಬದ ಬಸದಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕರು ಬಸದಿಯ ದೀಪಾಲಂಕಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.