ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರದಲ್ಲಿ ರಾಮಕ್ಷತ್ರಿಯ ಸೇವಾ ಸಂಘ, ಮಹಿಳಾ ವೃಂದ, ಯುವ ವೃಂದ ಹಾಗೂ ಭಜನಾ ವೃಂದದ ಸಂಯುಕ್ತ ಆಶ್ರಯದಲ್ಲಿ ಸತ್ಯನಾರಾಯಣ ಪೂಜೆ ಮತ್ತು ವಾರ್ಷಿಕ ಮಹಾಸಭೆಯುಜರುಗಿತು. ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಪ್ರೇಮಾನಂದ ಕೆ.ಎಸ್, ಮಂಗಳೂರು ಉತ್ತರ ವಲಯದ ಎ.ಸಿ.ಪಿ ಶ್ರೀಕಾಂತ್ ಕೆ, ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ನಾಗರಾಜ ಕಾಮಧೇನು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಜನಪದ ಪರಿಷತ್ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಪಾಲ್ಗೊಂಡಿದ್ದರು. ಸಮಾಜಮುಖಿ ಕಾರ್ಯಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ನೀಡಿದ ಸೇವೆಗಾಗಿ ಜವನೆರ್ ಬೆದ್ರ ಫೌಂಡೇಶನ್ ಸಂಸ್ಥಾಪಕ ಅಮರ್ ಕೋಟೆ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ ಹಾಗೂ ಅರ್ಹ ಫಲಾನುಭವಿಗಳಿಗೆ ಸಹಾಯ ಹಸ್ತ ಒದಗಿಸುವ ಕಾರ್ಯಕ್ರಮಗಳು ನಡೆದವು. ಸೂರ್ಯ ರಾವ್ ವರದಿ ವಾಚಿಸಿದರು. ಸಿಂಚನ, ಸ್ಪೂರ್ತಿ ಹಾಗೂ ಸೌಜನ್ಯ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು. ಈ ಕಾರ್ಯಕ್ರಮದಲ್ಲಿ ಸಮಿತಿಯ ವಿವಿಧ ಅಂಗಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.