ಮೂಡುಬಿದಿರೆ: ಬೆಂಗಳೂರಿನಲ್ಲಿ ನಡೆದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟ ಕಾಲೇಜುಗಳ 25ನೇ ಯುವ ಸಾಂಸ್ಕೃತಿಕ ಉತ್ಸವದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ನಾಲ್ಕನೇ ಸ್ಥಾನ ಪಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 160ಕ್ಕೂ ಹೆಚ್ಚು ತಾಂತ್ರಿಕ ಕಾಲೇಜುಗಳು ಭಾಗವಹಿಸಿದ್ದು, ವಿದ್ಯಾರ್ಥಿಗಳು ತಮ್ಮ ಸಾಂಸ್ಕೃತಿಕ ಪ್ರತಿಭೆಯನ್ನು ಅನಾವರಣಗೊಳಿಸಿದರು. ಉತ್ಸವದ ಅಂಗವಾಗಿ ಮೆರವಣಿಗೆ, ಸಂಗೀತ, ನಾಟಕ, ಕಲಾ ಸ್ಪರ್ಧೆಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು. ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಮೆರವಣಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪೌರಾತ್ಯ ಸಂಗೀತದಲ್ಲಿ ದ್ವಿತೀಯ ಸ್ಥಾನ, ಬೆಸ್ಟ್ ಔಟ್ ಆಫ್ ವೇಸ್ಟ್ನಲ್ಲಿ ದ್ವಿತೀಯ ಸ್ಥಾನ, ಕ್ಲೇ ಮಾಡೆಲಿಂಗ್ನಲ್ಲಿ ದ್ವಿತೀಯ ಸ್ಥಾನ, ಏಕಾಂಕ ನಾಟಕಕ್ಕೆ ಕಂಚಿನ ಪದಕ ಪಡೆದರೆ, ಕಿರು ಪ್ರಹಸನದಲ್ಲಿ ನಾಲ್ಕನೇ ಸ್ಥಾನ ಪಡೆದು ಸಮಗ್ರ ನಾಲ್ಕನೇ ಸ್ಥಾನ ಪಡೆಯಿತು. ವಿದ್ಯಾರ್ಥಿಗಳನ್ನು ಡಾ ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.