ಮೂಡುಬಿದಿರೆ: ಮಂಗಳೂರು ವಿ.ವಿ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಸತತ 22ನೇ ಬಾರಿ ಅವಳಿ ಪ್ರಶಸ್ತಿ ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಭುವನೇಂದ್ರ ಕಾಲೇಜು ತಂಡವನ್ನು ಸೋಲಿಸಿ ಶ್ರೀ ಎಂ.ಕೆ ಅನಂತರಾಜ್ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿತು. ಮಹಿಳೆಯರ ತಂಡವು ಎಸ್.ವಿ.ಟಿ ಕಾಲೇಜು ಕಟೀಲು ತಂಡವನ್ನು ಸೋಲಿಸಿ ಫೇಬಿಯನ್ ಬಿ ಎನ್ ಕುಲೊಸೊ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್ನ ನಂದ ಕುಮಾರ್ ಪಡೆದುಕೊಂಡರೆ, ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಆಕಾಶ್ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್ನ ತನುಶ್ರೀ ಪಡೆದುಕೊಂಡರೆ ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಗೀತಾ ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.