ಮೂಡುಬಿದಿರೆ: ತುಳುನಾಡ ಸಿರಿ ಮದಿಪು-2026 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಕರಗನೃತ್ಯ ಕಲಾವಿದ ವೆಂಕಟೇಶ ಬಂಗೇರರವರನ್ನು ಸನ್ಮಾನಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಉದ್ಘಾಟಿಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ನಟ ಅರವಿಂದ ಬೋಳಾರ್, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್, ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ಡಿ. ಸಾಮ್ರಾಜ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್, ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕ ಬಾಬು ಕೊರಗ ಪಾಂಗಾಳ, ಕಂಬಳ ಕೋಣಗಳ ಯಜಮಾನ ಇರುವೈಲು ಪಾಣಿಲ ಸತೀಶ್ಚಂದ್ರ ಉಪಸ್ಥಿತರಿದ್ದರು. ಪ್ರಮುಖರಾದ ಡಾ. ರಾಧಾಕೃಷ್ಣ ಶೆಟ್ಟಿ, ವಿಜಯಲಕ್ಷ್ಮೀ, ಹರೀಶ್ ಮತ್ತು ಸಾಕ್ಷಿ ಶೆಟ್ಟಿ, ತುಳು ಸಂಘದ ಕಾರ್ಯದರ್ಶಿ ರಂಜಿತ್, ವಿದ್ಯಾರ್ಥಿ ಸಂಯೋಜಕರಾದ ರಶ್ಮಿತಾ, ಶಾರದಾ, ಚರಿತ್ರ, ನವ್ಯ, ಮೊಹಮ್ಮದ್, ಜುನೈದ್, ಸಂಶೋಧ್, ಶರಣ್, ನಿವೇದಿತಾ, ರಿತೇಶ್ ಮತ್ತು ಸುಜಿತ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಖ್ಯ ಸಂಯೋಜಕಿ ಪೂರ್ಣಿಮಾ ಸನ್ಮಾನ ಪತ್ರ ವಾಚಿಸಿದರು. ಮಂದಾರ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಸಮಿತಿಯ ಪ್ರವೀಣ್ ಭಂಡಾರಿ ವಂದಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮೂಡುಬಿದಿರೆಯ ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜು ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಂಗಳೂರು ವಿವಿ ಮಟ್ಟದ ಸಾಂಸ್ಕೃತಿಕ-ಸಾಹಿತ್ಯಿಕ ಕಾರ್ಯಕ್ರಮ “ತುಳುನಾಡ ಸಿರಿ ಮದಿಪು ಕಾರ್ಯಕ್ರಮ ನಡೆಯಿತು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.