ಮೂಡುಬಿದಿರೆ : ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದ ಶ್ರೀ ದುರ್ಗಾದೇವಿ ಇಂಗ್ಲಿಷ್ ಮೀಡಿಯಂ ಶಾಲೆಯು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳಾದ ಆಧ್ಯಾ ಡಿ ಶೆಟ್ಟಿ 625ಕ್ಕೆ 603 ಅಂಕಗಳನ್ನು ಪಡೆಯುವ ಮೂಲಕ ಶೇ. 96.48ರಷ್ಟು ಸಾಧನೆ ಮಾಡಿದ್ದಾರೆ. ಅನ್ವಿತಾ ಎ ಕುಲಾಲ್ 584 ಅಂಕ, ಯಕ್ಷಿತ್ ಎಲ್. ಸಾಲ್ಯಾನ್ 581 ಅಂಕ ಹಾಗೂ ಸಿಯಾ ಪಿ ಸುವರ್ಣ 581 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಶ್ರಾವ್ಯ ಆರ್.ಆಚಾರ್ಯ (572 ಅಂಕ), ವಿಘ್ನೇಶ್ವರ ರಾವ್ (567 ಅಂಕ), ಶ್ರೇಯಾ ಎಸ್ ಶೆಟ್ಟಿ (556 ಅಂಕ), ಲಾವಣ್ಯ (546 ಅಂಕ), ಯಶ್ ಶೆಟ್ಟಿ (546 ಅಂಕ) ಮತ್ತು ಕೃತಿಕಾ ಎಸ್ ದಾಸ್ (533 ಅಂಕ) ಪಡೆದಿದ್ದಾರೆ. ಈ ಅಮೋಘ ಸಾಧನೆಯ ಜೊತೆಗೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಶಾಲೆಯ ಒಟ್ಟಾರೆ ಶೈಕ್ಷಣಿಕ ಗುಣಮಟ್ಟ ಹಾಗೂ ಆಡಳಿತಾತ್ಮಕ ಕಾರ್ಯಕ್ಷಮತೆಯನ್ನು ಗುರುತಿಸಿ ‘ಎ’ ಗ್ರೇಡ್ (A Grade) ಮಾನ್ಯತೆ ನೀಡಿ ಗೌರವಿಸಿದೆ. ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ದೇವಸ್ಯ ಅವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಅಭಿನಂದಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.