ಮೂಡುಬಿದಿರೆ: ಇಲ್ಲಿನ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯು 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 67 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಅದರಲ್ಲಿ 40 ಮಂದಿ ಪ್ರಥಮ ದರ್ಜೆ ಹಾಗೂ 14 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದವರು ಪಾಸ್ ವರ್ಗದಲ್ಲಿ ತೇರ್ಗಡೆಯಾಗಿದ್ದಾರೆ. ಶಾಲೆಯ ಬಿಂದುಶ್ರೀ 550 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಸುದೀಶ್ 542 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಆಕಾಶ್ 541 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಶಾಲೆಯ ಈ ಸಾಧನೆಗೆ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.