ಮೂಡುಬಿದಿರೆ: ಇಲ್ಲಿನ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರೇಕ್ಷಾ ಎಚ್‌. ಪೂಜಾರಿ ಅವರು ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ 625ರಲ್ಲಿ 609 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶಾಲೆಯಲ್ಲಿ ತೃತೀಯ ಸ್ಥಾನಿಯಾಗಿದ್ದಾರೆ.

ಪ್ರೇಕ್ಷಾ ಅವರು ಹರೀಶ್ ಕಾಪಿಕಾಡು ಹಾಗೂ ಸರಿತಾ ದಂಪತಿಯ ಪುತ್ರಿಯಾಗಿದ್ದಾರೆ. ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.