ಮೂಡುಬಿದಿರೆಯ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಆಶ್ರಯದಲ್ಲಿ ನಡೆದ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಹಿಂದೂ ಸಂಸ್ಕಾರ ಮತ್ತು ಸಂಸ್ಕೃತಿ ಕುರಿತು ಮಕ್ಕಳಿಗೆ ಮಾಹಿತಿ ನೀಡಲಾಯಿತು.

ಕ್ಷೇತ್ರದ ಪ್ರಧಾನ ಅರ್ಚಕರಾದ ವಿಘ್ನೇಶ್ವರ ಪುರೋಹಿತರು ಮಾತನಾಡಿ, ಅಳಿವಿನಂಚಿನಲ್ಲಿರುವ ನಮ್ಮ ಸಂಸ್ಕಾರ ಮತ್ತು ಸಂಸ್ಕೃತಿಗಳನ್ನು ಇಂದಿನ ಮಕ್ಕಳು ಪುನಶ್ಚೇತನಗೊಳಿಸುವ ಅಗತ್ಯವಿದೆ ಎಂದು ಹೇಳಿದರು. ಗುರುಗಳು, ಹಿರಿಯರು ಹಾಗೂ ಅತಿಥಿಗಳನ್ನು ಆತ್ಮೀಯತೆಯಿಂದ ಸತ್ಕರಿಸುವ ಸಂಪ್ರದಾಯವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಮಕ್ಕಳಿಂದ ತಂದೆ-ತಾಯಿಗಳಿಗೆ ಪಾದ ಪೂಜೆ ನಡೆಸಿಸ, ಹಿರಿಯರಿಗೆ ಗೌರವ ತೋರಿಸುವ ಸಂಸ್ಕಾರವನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಯಿತು.