ಮೂಡುಬಿದಿರೆ: ಕಾರ್ಕಳ ಕಡೆಯಿಂದ ಮೂಡುಬಿದಿರೆ ಕಡೆಗೆ ಮರ ತುಂಬಿಸಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದ ಧ್ವಾರದ ಬಳಿ ಭಾನುವಾರ ಪಲ್ಟಿಯಾಗಿದೆ.
ಲಾರಿ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ ಮರದ ತುಂಡುಗಳು ರಸ್ತೆಗೆ ಎಸೆಯಲ್ಪಟ್ಟಿವೆ. ಅಪಘಾತದ ತೀವ್ರತೆಗೆ ಲಾರಿ ಜಖಂಗೊಂಡಿದ್ದರೂ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.