ಮೂಡುಬಿದಿರೆ: ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕೆ. ಎಚ್ ಅದಿತಿ ಭೂಷಣ್ ಹಾಗೂ ವಿಜ್ಞಾನ ವಿಭಾಗದಲ್ಲಿ ತನ್ಮಯ ಏ ಕೋಟಿ ತಲಾ 597 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪರಿಶ್ರಮದ ಮೂಲಕ ಅತಿ ಹೆಚ್ಚು ಅಂಕ ಗಳಿಸಿ ಸಾಧಕರ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.