ಮೂಡುಬಿದಿರೆ: ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಆಯೋಜಿಸಲಾದ ಹೊರೆಕಾಣಿಕೆ ಮೆರವಣಿಗೆಗೆ ಭಾನುವಾರ ಭವ್ಯ ಚಾಲನೆ ದೊರೆಯಿತು.
ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಅವರು ಮೆರವಣಿಗೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೆ. ಶ್ರೀಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎ. ಜೀವಂಧರ ಕುಮಾರ್, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ ಶಂಭು ಎನ್. ಶೆಟ್ಟಿ, ಆಡಳಿತ ಮೊಕ್ತೇಸರ ಹೊಸಂಗಡಿ ಅರಮನೆ ಸಂಪತ್ ಕುಮಾರ್ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಖಂಡಿಗ ರಾಮದಾಸ ಆಸ್ರಣ್ಣ, ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಕೆ. ಶೆಟ್ಟಿ, ಉದ್ಯಮಿ ರಾಘು ಸಿ. ಪೂಜಾರಿ, ಶ್ರೀಪತಿ ಉಪಾಧ್ಯಾಯ ಬಡೆಕೋಡಿ, ಸುಧಾಕರ ಶೆಟ್ಟಿ ಮಿತ್ತೊಟ್ಟುಗುತ್ತು, ಕೋಶಾಧಿಕಾರಿ ಶಂಕರ ಎ. ಕೋಟ್ಯಾನ್, ಜತೆ ಕಾರ್ಯದರ್ಶಿ ಸುಶಾಂತ್ ಕರ್ಕೇರಾ, ಸ್ವಾಗತ ಸಮಿತಿ ಅಧ್ಯಕ್ಷ ರಮೇಶ್ ಎಸ್. ಶೆಟ್ಟಿ, ಸುನಿಲ್ ಶೆಟ್ಟಿ, ಆರ್ಥಿಕ ಸಮಿತಿಯ ಅಶೋಕ್ ಬಿ., ದೇವರಾಜ್ ಸುವರ್ಣ ಪೊಸಲಾಯಿ, ಧರಣೇಂದ್ರ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.