ಮೂಡುಬಿದಿರೆ: ಬೆಳುವಾಯಿ ಗ್ರಾಮದ ಬಂಗ್ಲಗುಡ್ಡೆಯ ಹಾಲೋ ಬ್ಲಾಕ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಜಗದೀಶ್ ಕಾಣೆಯಾಗಿದ್ದಾರೆ. ಏಪ್ರಿಲ್ 25ರಂದು ಕೆಲಸಕ್ಕೆಂದು ಹೋಗಿದ್ದು, ಸಂಜೆ 5:40 ಗಂಟೆಗೆ ಕೆಲಸ ಮುಗಿಸಿ ಫ್ಯಾಕ್ಟರಿಯಿಂದ ಹೊರಟಿದ್ದರು. ಬೆಳುವಾಯಿಯಿಂದ ಮೂಡುಬಿದಿರೆ ಕಡೆಗೆ ಸರಕಾರಿ ಬಸ್ಸಿನಲ್ಲಿ ತೆರಳಿದ್ದ ಜಗದೀಶ್ ನಂತರ ಮನೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. 37 ವರ್ಷ ಪ್ರಾಯದ ಜಗದೀಶ್, ಕಪ್ಪು ಕೂದಲು, ಬಿಳಿ ಮೈಬಣ್ಣ ಹಾಗೂ ಸಪೂರ ದೇಹದ ವ್ಯಕ್ತಿತ್ವ ಹೊಂದಿದ್ದಾರೆ. ನಾಪತ್ತೆಯಾಗುವ ಸಂದರ್ಭದಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಹಾಗೂ ತಿಳಿ ಹಸಿರು ಬಣ್ಣದ ಅರ್ಧ ತೋಳಿನ ಶರ್ಟ್ ಧರಿಸಿದ್ದರು. ಇವರು ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆ (ದೂರವಾಣಿ ಸಂಖ್ಯೆ: 08258 - 236333) ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲು ಕೋರಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.