ಮೂಡುಬಿದಿರೆ: ಯೆನೇಪೋಯ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ಕೋಟೆಬಾಗಿಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆರಂಭಗೊಂಡಿತು. ಶಾಲೆಯ ಮುಖ್ಯ ಶಿಕ್ಷಕ ಮೆಲ್ವಿನ್ ಅಲ್ಬುಕರ್ಕ್ ಶಿಬಿರ ಉದ್ಘಾಟಿಸಿ, ವಿದ್ಯಾರ್ಥಿಗಳು ತಮ್ಮ ಕಲಿಕೆಯ ಅವಧಿಯಲ್ಲಿ ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಮಾಜದ ಉತ್ತಮ ಪ್ರಜೆಗಳಾಗಿ ಸಹಕರಿಸಬೇಕು ಎಂದರು.

ಕಾಲೇಜಿನ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಟೆಬಾಗಿಲು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ವಿಜಯ ಹಾಗೂ ಸದಸ್ಯೆ ರೂಪ ಭಾಗವಹಿಸಿದ್ದರು

ಎನ್.ಎಸ್.ಎಸ್ ಸಂಯೋಜನಾಧಿಕಾರಿ ಪ್ರೊ. ಶ್ರೀನಿವಾಸ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಸಿಂಚನ ಕಾರ್ಯಕ್ರಮ ನಿರ್ವಹಿಸಿದರು.