ಮೂಡುಬಿದಿರೆ: ಮೇ ತಿಂಗಳಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿರುವ ಹೊಸಂಗಡಿ ಮಾರೂರು ಶ್ರೀ ಗೋಪಾಲಕೃಷ್ಣ, ಕೊಡಮನಿತ್ತಾಯ ದೇವಸ್ಥಾನಕ್ಕೆ ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದ ಹೊರೆಕಾಣಿಕೆ ಸಲ್ಲಿಸಲಾಯಿತು. ಇರುವೈಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಜಾತ ಜೆ. ಶೆಟ್ಟಿ, ಮುಂಬಯಿ ಸಮಿತಿಯ ಗೌರವಾಧ್ಯಕ್ಷ ಭುಜಂಗ ಆರ್. ಶೆಟ್ಟಿ, ಇರುವೈಲು ಹಾಗೂ ಸತೀಶ್ಚಂದ್ರ ಸಾಲ್ಯಾನ್ ಅವರ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಫುಲ್ಲ ಕೆ. ಸಾಲ್ಯಾನ್, ದೀಪಾ ದಿನೇಶ್ ಐತಾಳ್, ಗ್ರಾಮಸ್ಥರಾದ ಇರುವೈಲು ಪಂಜಿ ದಿನೇಶ ಪ್ರಭು, ಮತ್ತಿತರರು ಹೊಸಂಗಡಿ ದೇವಸ್ಥಾನಕ್ಕೆ ಆಗಮಿಸಿ ಹೊರೆಕಾಣಿಕೆ ನೀಡಿದರು. ಹೊಸಂಗಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ಕುಮಾರ್ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಾರುತಿಗುಡ್ಡೆ ಶಂಭು ಎಸ್. ಶೆಟ್ಟಿ ಸಮಕ್ಷಮದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು. ಇರುವೈಲು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಸುಜಾತ ಜೆ. ಶೆಟ್ಟಿ ಅವರನ್ನು ಗೌರವಿಸಲಾಯಿತು. ಮುಂಬಯಿ ಸಮಿತಿಯ ಅಧ್ಯಕ್ಷ ಭೋಜ ಎಸ್. ಶೆಟ್ಟಿ, ಮುಂಬಯಿ ಸಮಿತಿಯ ಕೋಶಾಧಿಕಾರಿ ಬಾಡಬೆಟ್ಟು ಸಿ.ಪಿ. ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ದೇವಸ್ಥಾನದ ಕಚೇರಿ ಸಹಾಯಕಿ ಸೇವಂತಿ ಮತ್ತು ಇತರರು ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.