ಮೂಡುಬಿದಿರೆ: ಸಾಮ್ರಾಜ್ಯಶಾಹಿ ನೀತಿಯ ವಿರುದ್ಧ, ಎಂಟು ಗಂಟೆಯ ಕೆಲಸ ಕಾರ್ಮಿಕರ ಹಕ್ಕು ಎಂಬ ಘೋಷಣೆಯೊಂದಿಗೆ ಮೂಡುಬಿದಿರೆಯಲ್ಲಿ ಮೇ 1ರಂದು ಕಾರ್ಮಿಕ ಅಂತರರಾಷ್ಟ್ರೀಯ ದಿನವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9:30ಕ್ಕೆ ಜಿ.ವಿ.ಪೈ ಆಸ್ಪತ್ರೆಯ ಮುಂಭಾಗದಲ್ಲಿರುವ ಸಿಐಟಿಯು ಕಚೇರಿ ಬಳಿಯಿಂದ ಕಾರ್ಮಿಕ ವರ್ಗದ ಮೆರವಣಿಗೆ ಆರಂಭಗೊಳ್ಳಲಿದೆ. ಬಳಿಕ 10 ಗಂಟೆಗೆ ಮೂಡುಬಿದಿರೆ ತಹಶೀಲ್ದಾರ್ ಕಚೇರಿ ಬಳಿ ಸಾರ್ವಜನಿಕ ಸಭೆ ಹಾಗೂ ಕಾರ್ಮಿಕರು ಮತ್ತು ಅವರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಮಿಕ ವಿರೋಧಿ ಸಂಹಿತೆಯನ್ನು ವಿರೋಧಿಸಿ ಮತ್ತು ಕನಿಷ್ಠ ಕೂಲಿಯನ್ನು ಪರಿಷ್ಕರಿಸಲು ಒತ್ತಾಯಿಸಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೀಡಿ, ಕಟ್ಟಡ, ಬಿಸಿಯೂಟ ಸೇರಿದಂತೆ ಇನ್ನಿತರ ಕಾರ್ಮಿಕರು, ಪಿಂಚಣಿದಾರರು, ಯುವಜನರು, ಮಹಿಳೆಯರು, ದಲಿತ ಹಾಗೂ ಆದಿವಾಸಿ ಬುಡಕಟ್ಟು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮೇ ದಿನ ಆಚರಣಾ ಸಮಿತಿಯ ಸಂಚಾಲಕರಾದ ಶಂಕರ ವಾಲ್ಪಾಡಿ, ರಾಧಾ ಪುತ್ತಿಗೆ ವಿನಂತಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.