ಮುಂಬೈ: ನಾಪತ್ತೆಯಾಗಿದ್ದ ಮೂಡುಬಿದಿರೆಯ ಜಗದೀಶ್ ಅವರು ಮುಂಬೈನ ನವಿ ಮುಂಬೈ ಪನ್ವೆಲ್ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಜಗದೀಶ್ ಅವರ ಕುಟುಂಬದವರು, ಮೂಡುಬಿದಿರೆ ಪೊಲೀಸ್ ಠಾಣೆ ಹಾಗೂ ಸ್ಥಳೀಯ ಕುಲಾಲ ಸಮಾಜದ ಸದಸ್ಯರು ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಮತ್ತು ಪತ್ರಕರ್ತ ದಿನೇಶ್ ಕುಲಾಲ್ ಅವರನ್ನು ಸಂಪರ್ಕಿಸಿದ್ದರು. ಜಗದೀಶ್ ಅವರು ಪನ್ವೆಲ್ನ ಬಾಲಕೃಷ್ಣ ಶೆಟ್ಟಿ ಅವರ ಹೋಟೆಲ್ನಲ್ಲಿ ಸುರಕ್ಷಿತವಾಗಿ ತಂಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅವರ ಸಂಬಂಧಿಕರು ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ. ಏಪ್ರಿಲ್ 25ರಂದು ಕೆಲಸಕ್ಕೆ ತೆರಳಿದ್ದ ಜಗದೀಶ್ ಅವರು ಸಂಜೆ 5:40ಕ್ಕೆ ಫ್ಯಾಕ್ಟರಿಯಿಂದ ಹೊರಟಿದ್ದರು. ಬಳಿಕ ಬೆಳುವಾಯಿಯಿಂದ ಮೂಡುಬಿದಿರೆ ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸಿದ್ದರು. ಆದರೆ ನಂತರ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.