ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಇವರ ನೇತೃತ್ವದಲ್ಲಿ ಮೇ 8, 9 ಮತ್ತು 10ರಂದು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಬೃಹತ್ ಹಲಸು ಮೇಳ ನಡೆಯಲಿದೆ. ಈ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಲಸಿನ ವೈವಿಧ್ಯಮಯ ತಳಿಗಳು ಹಾಗೂ ಉತ್ಪನ್ನಗಳ ಮಾರಾಟಗಾರರು ಪಾಲ್ಗೊಳ್ಳಲಿದ್ದಾರೆ. ಮೇಳದ ಅಂಗವಾಗಿ ಭಜನಾ ಸಪ್ತಸ್ವರ ಭಜನೆ ಸ್ಪರ್ಧೆ, ವಾಯ್ಸ್ ಆಫ್ ಬೆದ್ರ ಸಂಗೀತ ಸ್ಪರ್ಧೆ ಹಾಗೂ ಅಡುಗೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಭಜನಾ ಸ್ಪರ್ಧೆಯು 10ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಸೀಮಿತವಾಗಿದ್ದು, ಕೇವಲ ದಾಸ ಕೀರ್ತನೆಗಳಿಗೆ ಅವಕಾಶ ನೀಡಲಾಗಿದೆ. ವಾಯ್ಸ್ ಆಫ್ ಬೆದ್ರ ಸಂಗೀತ ಸ್ಪರ್ಧೆಯಲ್ಲಿ ರಾಗ, ತಾಳ ಹಾಗೂ ಸ್ವರಕ್ಕೆ ಪ್ರಾಮುಖ್ಯತೆ ನೀಡಲಾಗುವುದು. ಮಹಿಳೆಯರು ಮತ್ತು ಮಕ್ಕಳಿಗಾಗಿ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದ್ದು, ಮಹಿಳೆಯರು ಮನೆಯಲ್ಲೇ ಹಲಸಿನ ಖಾದ್ಯ ತಯಾರಿಸಿ ತರಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬೆಂಕಿ ಇಲ್ಲದ ಅಡುಗೆ ಸ್ಪರ್ಧೆ ಇರಲಿದ್ದು, ಸ್ಥಳದಲ್ಲೇ ತಯಾರಿಸಲು ಒಂದು ಗಂಟೆಯ ಕಾಲಾವಕಾಶ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಪ್ರೆಸ್ ಕ್ಲಬ್ ಹಾಗೂ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.