ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗವು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಇನ್ನೂ 2 ರಾಜ್ಯ ಮಟ್ಟದ ರ್ಯಾಂಕ್ ಪಡೆದಿದೆ. ನಿತಿನ್ ಡಿ.ವಿ. (594/600) ಮತ್ತು ನಿಶ್ಚಯ ಪೈ (593/600) ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಈ ಸಾಧನೆ ಮಾಡಿದರು. ಈ ಮೂಲಕ ವಾಣಿಜ್ಯ ವಿಭಾಗದ ಒಟ್ಟು ರಾಜ್ಯ ಮಟ್ಟದ ರ್ಯಾಂಕ್ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಕಾಲೇಜಿನ ಒಟ್ಟು ರ್ಯಾಂಕ್ ಸಂಖ್ಯೆ 34ಕ್ಕೆ ಹೆಚ್ಚಳವಾಗಿದೆ. ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಮರು ಮೌಲ್ಯಮಾಪನದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.