ಮೂಡುಬಿದಿರೆ: ಪುತ್ತಿಗೆಯ ಮಹತೋಭಾರ ಸೋಮನಾಥೇಶ್ವರ ದೇವಸ್ಥಾನದ ಹಗಲು ರಥೋತ್ಸವದ ಅಂಗವಾಗಿ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ಸಾಂಸ್ಕೃತಿಕ ವೇದಿಕೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಕರಿಂಜೆ ಶ್ರೀಗಳಿಂದ 'ಯಕ್ಷ ಭಗೀರಥ' ಪ್ರಶಸ್ತಿ ಪುರಸ್ಕೃತರಾದ ಯಕ್ಷನಿಧಿ ಮೂಡುಬಿದಿರೆ ಶಿಕ್ಷಣ ಸಂಸ್ಥೆ ಹಾಗೂ ಯುವ ಮೇಳದ ಗುರು ಶಿವಕುಮಾರ್ ಮೂಡುಬಿದಿರೆ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಕುಲದೀಪ ಎಂ. ಪುತ್ತಿಗೆಗುತ್ತು, ಕೊಲಕಾಡಿ ನಿಲೇಶ್ ಶೆಟ್ಟಿ, ಮಹಾಮ್ಮಾಯಿ ಮರಾಟಿ ಸಂಘದ ಮಾಜಿ ಅಧ್ಯಕ್ಷ ವಿಠಲ ನಾಯ್ಕ, ಅಂಗನವಾಡಿ ಕಾರ್ಯಕರ್ತೆ ಗುಣಶೀಲ, ಸಂಜೀವ ನಾಯ್ಕ ಶೇಡಿಗುರಿ ಉಪಸ್ಥಿತರಿದ್ದರು. ಸಂಜೀವ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಯಕ್ಷನಿಧಿ ಮೂಡುಬಿದಿರೆ ಮಕ್ಕಳ ತಂಡದಿಂದ 'ಛತ್ರಪತಿ ಶಿವಾಜಿ' ಯಕ್ಷಗಾನ ಪ್ರದರ್ಶನಗೊಂಡಿತು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.