ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಜಾರ್ಖಂಡ್‌ನ ಜೈನ ಸಿದ್ಧಕ್ಷೇತ್ರ ಸಮ್ಮೇದ ಶಿಖರ್ಜಿಯಲ್ಲಿ ಸಿದ್ಧಕೂಟಗಳ ವಂದನೆ ಮಾಡಿದರು. ಆಚಾರ್ಯ ವಸುನಂದಿ ಮಹಾರಾಜ್ ಅವರ ಪಂಚಕಲ್ಯಾಣ ಹಾಗೂ ಆಚಾರ್ಯ ಪ್ರಮಾಣಸಾಗರ ಮಹಾರಾಜ್ ಅವರ ಶಂಕಾ ಸಮಾಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೆಹಲಿಯ ಕುಂದ ಕುಂದ ಭಾರತಿ ಜೈನ ಕೇಂದ್ರದಲ್ಲಿ ಜರುಗಿದ ಸ್ವರ್ಗೀಯ ಶ್ವೇತ ಪಿಂಚಾಚಾರ್ಯ 108 ವಿದ್ಯಾನಂದ ಮುನಿ ಮಹಾರಾಜ್ ಅವರ 101ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮೀಜಿ ಪಾಲ್ಗೊಂಡರು. ಆಶೀರ್ವಚನ ನೀಡಿದ ಶ್ರೀಗಳು, ಆಚಾರ್ಯ ವಿದ್ಯಾನಂದ ಮುನಿಗಳು ಉತ್ತರ ಮತ್ತು ದಕ್ಷಿಣ ಭಾರತದ ಹೆಚ್ಚಿನ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರಕ್ಕೆ ಮಹತ್ತರ ಪ್ರೇರಣೆ ನೀಡಿದವರು ಎಂದು ಸ್ಮರಿಸಿದರು. ಅನೇಕ ರಾಷ್ಟಿಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅವರು ರಾಷ್ಟ್ರಸಂತರಾಗಿ ಗುರುತಿಸಿಕೊಂಡಿದ್ದಾರೆ ಹಾಗೂ ಅವರ ಪ್ರವಚನ ಸಂದೇಶಗಳು ಜನಮಾನಸದಲ್ಲಿ ಲೋಕಪ್ರಿಯವಾಗಿವೆ ಎಂದರು. ಆಚಾರ್ಯ ಶ್ರುತಸಾಗರ ಮುನಿ ಮಹಾರಾಜ್, ಹಸ್ತಿನಾಪುರದ ರವೀಂದ್ರಕೀರ್ತಿ ಸ್ವಾಮೀಜಿ, ತಿಜಾರದ ಸೌರಭ್‌ಸೇನ ಸ್ವಾಮೀಜಿ, ಟ್ರಸ್ಟ್ ಅಧ್ಯಕ್ಷ ಸತೀಶ್ ಜೈನ್, ಮಹಾಮಂತ್ರಿ ಅನಿಲ್ ಜೈನ್ ಹಾಗೂ ಅರ್ಜುನ್ ಜೈನ್, ವಿದ್ವಾಂಸ ಪ್ರೊ. ಅನೇಕಾಂತ ಜೈನ್, ಡಾ. ವೀರಸಾಗರ ಜೈನ್ ಮತ್ತಿತರರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.