ಮೂಡುಬಿದಿರೆ: ಜೈನಪೇಟೆಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯು ವಿಶ್ವ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗಾಗಿ ವಿಶೇಷ ಕಣ್ಣಿನ ತಪಾಸಣೆ ಸುರಕ್ಷಿತ ವಾರವನ್ನು ಹಮ್ಮಿಕೊಂಡಿದೆ. ಮೇ 1 ರಿಂದ ಮೇ 7 ರವರೆಗೆ ನಡೆಯಲಿರುವ ಈ ವಿಶೇಷ ಅಭಿಯಾನದಲ್ಲಿ ಕಾರ್ಮಿಕ ವರ್ಗದವರು ಕಣ್ಣಿನ ತಪಾಸಣೆಗೆ ಶೇ. 50 ರಷ್ಟು ರಿಯಾಯಿತಿ ಪಡೆಯಬಹುದು. ಶಸ್ತ್ರಚಿಕಿತ್ಸೆಗೆ ಶೇ. 15 ರಷ್ಟು ಹಾಗೂ ಕನ್ನಡಕಗಳ ಖರೀದಿಗೆ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಜೈನಪೇಟೆಯ ಫಾರ್ಚೂನ್ ಹೈವೇ-II ಕಟ್ಟಡದ ಮೊದಲ ಮಹಡಿಯಲ್ಲಿರುವ ಆಸ್ಪತ್ರೆಯಲ್ಲಿ ಪ್ರತಿದಿನ ಬೆಳಿಗ್ಗೆ 9:30 ರಿಂದ ಸಂಜೆ 6:30 ರವರೆಗೆ ತಪಾಸಣೆ ಲಭ್ಯವಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 87927 91085 ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.