ಮೂಡುಬಿದಿರೆ: ಸ್ವಚ್ಛ ಭಾರತ ಮಿಷನ್ (ನಗರ) 2.0 ಯೋಜನೆಯಡಿ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ನಡೆಸುವ 'ಸ್ವಚ್ಛ ಸರ್ವೇಕ್ಷಣೆ 2025-26' ರ ಸಮೀಕ್ಷೆಯಲ್ಲಿ ನಾಗರಿಕರು ತಮ್ಮ ಅಭಿಪ್ರಾಯ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಜನಸಾಮಾನ್ಯರು ಸ್ಮಾರ್ಟ್ ಮೊಬೈಲ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಸಚಿವಾಲಯದ ಅಧಿಕೃತ ವೆಬ್ ಲಿಂಕ್ ಬಳಸಿ ನೈಜ ಅಭಿಪ್ರಾಯ ಹಂಚಿಕೊಳ್ಳುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ. ಸರಳ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ನಗರವನ್ನು ಸ್ವಚ್ಛತೆಯ ಮಾನದಂಡದಲ್ಲಿ ಮುಂಚೂಣಿಗೆ ತರಲು ಸಹಕರಿಸಬೇಕು. ಸಾರ್ವಜನಿಕರು ಮನೆಯಲ್ಲಿಯೇ ಕಸವನ್ನು ಹಸಿ, ಒಣ ಹಾಗೂ ಅಪಾಯಕಾರಿ ತ್ಯಾಜ್ಯವಾಗಿ ವಿಂಗಡಿಸುವುದರ ಜೊತೆಗೆ ಮಾರುಕಟ್ಟೆ, ನಿಲ್ದಾಣ ಮತ್ತು ಧಾರ್ಮಿಕ ಕ್ಷೇತ್ರಗಳ ನೈರ್ಮಲ್ಯ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ನಗರಕ್ಕಾಗಿ ಬಟ್ಟೆ ಚೀಲಗಳನ್ನು ಬಳಸುವ ಅಭ್ಯಾಸ ರೂಢಿಸಿಕೊಳ್ಳುವಂತೆ ಅವರು ತಿಳಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.