ವೇಣೂರು: ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಆರಂಬೋಡಿ ವ್ಯಾಪ್ತಿಯ ಪಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಕಾನೂನು ಬಾಹಿರ ಮರಳುಗಾರಿಕೆ ವಿರುದ್ಧ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಭಂಡಾರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮರಳು ಗಣಿಗಾರಿಕೆಗೆ ಪರವಾನಿಗೆ ನೀಡಿರುವ ಪ್ರದೇಶವನ್ನು ಮೀರಿ, ನದಿ ತಟದ ಬೇರೆ ಭಾಗಗಳಲ್ಲಿ ಜೆಸಿಪಿ ಬಳಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದನ್ನು ರೈತರು ತೀವ್ರವಾಗಿ ಖಂಡಿಸಿದರು. ರೈತರ ಈ ದಿಟ್ಟ ಹೋರಾಟಕ್ಕೆ ಮಣಿದ ಗಣಿ ಇಲಾಖೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾದರು. ತಹಶೀಲ್ದಾರ್ ಹಾಗೂ ಭೂಮಾಪಕರ ಸಮಕ್ಷಮದಲ್ಲಿ ಅಳತೆ ಕಾರ್ಯ ಪೂರ್ಣಗೊಳ್ಳುವವರೆಗೆ ಮರಳು ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಗಣಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ನಿರ್ಧಾರವು ಭಾರತೀಯ ಕಿಸಾನ್ ಸಂಘ ಮತ್ತು ಸ್ಥಳೀಯ ರೈತರ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂಘಟನೆಯ ಪ್ರಮುಖರಾದ ಸದಾಶಿವ, ಪ್ರವೀಣ್, ಮಂಗಳೂರಿನ ಅಶ್ವಿನಿ ಪೂಜಾರಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.